ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೊರೊನಾ ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನಿವೃತ್ತ ನ್ಯಾಯಮೂರ್ತಿ ಜಾನ್ ಮೂಕಲ್ ಡಿ.ಮೈಕಲ್ ಕುನ್ಹಾ ಆಯೋಗ ಹೇಳಿದೆ. ಈ ಸಂಬಂಧ ಅಂದಿನ ಮುಖ್ಯಮಂತ್ರಿ…
Author: Fast News 24
ನಾನು ಉದ್ಯಮ ವಿರೋಧಿ ಅಲ್ಲ, ಏಕಸ್ವಾಮ್ಯದ ವಿರೋಧಿ: ರಾಹುಲ್ ಗಾಂಧಿ
ನವದೆಹಲಿ: ತನ್ನನ್ನು ಉದ್ಯಮ ವಿರೋಧಿ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ತಾನು ಉದ್ಯಮ ವಿರೋಧಿಯಲ್ಲ. ಆದರೆ, ಆರ್ಥಿಕ ಶಕ್ತಿಯ ಕೇಂದ್ರೀಕರಣದ ವಿರೋಧಿ, ಉದ್ಯಮ ಏಕಸ್ವಾಮ್ಯದ ವಿರೋಧಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ರಾಹುಲ್ ಗಾಂಧಿ ಉದ್ಯಮ ಮತ್ತು ಉದ್ಯಮಿಗಳ ವಿರೋಧಿ ಎನ್ನುವಂತಹ…
ಸುಳ್ಳು ಮಾಹಿತಿ ಹರಡಿದ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್
ಹಾವೇರಿ: ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ,…
ವಯನಾಡ್: ಕೇರಳದ ವಯನಾಡಿನಲ್ಲಿ ಜಮಾತ್-ಎ-ಇಸ್ಲಾಮಿ ಬೆಂಬಲದಿಂದ ಪ್ರಿಯಾಂಕಾ ಗಾಂಧಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ: ಪಿಣರಾಯಿ ವಿಜಯನ್
ವಯನಾಡ್: ಲೋಕಸಭೆ ಉಪಚುನಾವಣೆಗೆ ಮುನ್ನ ಕೇರಳದ ವಯನಾಡಿನಲ್ಲಿ ರಾಜಕೀಯದ ಬಿಸಿ ಏರುತ್ತಿದ್ದು, ಜಮಾತ್-ಎ-ಇಸ್ಲಾಮಿ ಬೆಂಬಲದೊಂದಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಜಮಾತ್-ಎ-ಇಸ್ಲಾಮಿ…
ಫೆಲೆಸ್ತೀನ್ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ FIR: ಪೊಲೀಸರ ನಡೆ ನಾಚಿಗೇಡು; ಅನ್ವರ್ ಸಾದತ್
ಮಂಗಳೂರು: ಫೆಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿ ಖಂಡಿಸಿ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದ 11 ಮಂದಿ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಈ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಎಸ್ ಡಿಪಿಐ…
ಅಮೆರಿಕ ಅಧ್ಯಕ್ಷೀಯ ಚುನಾವಣೆ: ಟ್ರಂಪ್ ಗೆ ಗೆಲುವು
FAST NEWS NOVEMBER 6, 2024 ನ್ಯೂಯಾರ್ಕ್: ಭಾರಿ ಕುತೂಹಲ ಮೂಡಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ನ ಡೊನಾಲ್ಡ್ ಟ್ರಂಪ್ ಐತಿಹಾಸಿಕ ಗೆಲುವು ದಾಖಲಿಸಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಲು ಸಜ್ಜಾಗಿರುವ ಟ್ರಂಪ್, ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ 2ನೇ ಬಾರಿಗೆ ಚುಕ್ಕಾಣಿ ಹಿಡಿದು…
ಶ್ರೀ ಆದಿ ಚುಂಚನಗಿರಿ ಮಠದ ಶಿವಮೊಗ್ಗ ಶಾಖೆಯ 34ನೇ ವಾರ್ಷಿಕೋತ್ಸವದ ಅಂಗವಾಗಿ “ಭಗವತ್ ಚಿಂತನ – ಧರ್ಮ ಸಂಕಥನ’ ಕಾರ್ಯಕ್ರಮ
ದಿನಾಂಕ 4-11-2024, ಸೋಮವಾರ ಶ್ರೀ ಆದಿಚುಂಚನಗಿರಿ ಸಮುದಾಯ ಭವನ, ಶರಾವತಿ ನಗರ, ಶಿವಮೊಗ್ಗದಲ್ಲಿ ನಡೆದ ಶ್ರೀ ಆದಿ ಚುಂಚನಗಿರಿ ಮಠದ ಶಿವಮೊಗ್ಗ ಶಾಖೆಯ 34ನೇ ವಾರ್ಷಿಕೋತ್ಸವದ ಅಂಗವಾಗಿ “ಭಗವತ್ ಚಿಂತನ – ಧರ್ಮ ಸಂಕಥನ’ ಕಾರ್ಯಕ್ರಮದಲ್ಲಿ ‘ಮನುಕುಲದ ಪರಿವರ್ತನೆ, ವಿಶ್ವಶಾಂತಿ ಹಾಗೂ…
ವಿಚಾರಣೆ ಅಂತ್ಯ: ಶಿಳ್ಳೆ ಹೊಡೆಯುತ್ತಾ ಲೋಕಾ ಕಚೇರಿಯಿಂದ ಹೊರಬಂದ ಸಿಎಂ ಸಿದ್ದರಾಮಯ್ಯ
ಮೈಸೂರು: ಮುಡಾ ಕೇಸ್ ನಲ್ಲಿ ತನಿಖೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಬುಲಾವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಸದ್ಯ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿ ಸತತ 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಲೋಕಾಯುಕ್ತ ಎಸ್.ಪಿ. ಉದೇಶ್ ನೇತೃತ್ವದಲ್ಲಿ ವಿಚಾರಣೆ ನಡೆಸಿದ್ದು, ಸಿಎಂ…
ವಕ್ಫ್ (ತಿದ್ದುಪಡಿ) ಮಸೂದೆ 2024 : ಜಮಾಅತೆ ಇಸ್ಲಾಮಿ ಹಿಂದ್ ನಿಯೋಗದಿಂದ JPC ಭೇಟಿ
ಜಮಾತ್ ಇ ಇಸ್ಲಾಮಿ ಹಿಂದ್‌ನ ಕೇಂದ್ರ ನಿಯೋಗವು ಉಪಾಧ್ಯಕ್ಷ ಮಲಿಕ್ ಮೊತಸೀಮ್ ಖಾನ್ ನೇತೃತ್ವದಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ 2024 ಸಂಬಂಧಿಸಿದಂತೆ ನವೆಂಬರ್ 4 ರಂದು ಜೆಪಿಸಿಯನ್ನು ಭೇಟಿ ಮಾಡಿತು. ನಿಯೋಗವು ಸಮಿತಿಯ ಸದಸ್ಯರಿಗೆ ವಿವರವಾದ ಪ್ರಾತಿನಿಧ್ಯವನ್ನು ನೀಡಿತು. ಪ್ರಸ್ತಾವಿತ ಮಸೂದೆಯ…
ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮಹತ್ಯೆ!
ಗದಗ: ಕೊರ್ಲಹಳ್ಳಿ: ತಂದೆಯೋರ್ವ ತನ್ನ ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗದಗ ಜಿಲ್ಲೆಯ ಕೊರ್ಲಹಳ್ಳಿ ಬಳಿ ನಡೆದಿದೆ. ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ಮೊದಲು ಮೂವರು ಮಕ್ಕಳನ್ನು ನದಿಗೆ ಎಸೆದು…