ಗುರುಲಿಂಗ ಕಾಪಸೆ ಅವರ ಬಗ್ಗೆ

Share
0Shares

ಧಾರವಾಡ 26 :
ಗುರುಲಿಂಗ ಕಾಪಸೆ ಅವರು 1928ರ ಏಪ್ರಿಲ್ 2 ರಂದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಿ.ಕೆ. ಲೋಣಿಯಲ್ಲಿ ಜನಿಸಿದರು. ಮಧುರಚೆನ್ನರ ಜೀವನ ಹಾಗೂ ಕೃತಿಗಳು ಕುರಿತು ಮಹಾಪ್ರಬಂಧ ಬರೆದಿದ್ದಾರೆ. ‘ಹಲಸಂಗಿ ಗೆಳೆಯರು’ (1998, ಪ್ರಸಾರಾಂಗ ಕನ್ನಡ ವಿಶ್ವವಿದ್ಯಾಲಯ ಹಂಪಿ) ಡಾ. ಕಾಪಸೆ ಅವರು ಸಂಪಾದಿಸಿದ ಮಧುರ ಚೆನ್ನರ ಲೇಖನಗಳಲ್ಲಿ ಆ ಕಾಲದ ಅನೇಕ ಜಾನಪದ ವಿರಳ ಸಂಗತಿಗಳು ದಾಖಲಾಗಿವೆ. ಕನ್ನಡ ವಿಶ್ವವಿದ್ಯಾಲಯವು “ಜಾನಪದ ಅಧ್ಯಯನ” ಕ್ಕೆ ಕೊಟ್ಟ ವಿಶಿಷ್ಠ ಕೊಡುಗೆಯಾಗಿದೆ. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದಾರೆ.

ಕೃತಿಗಳು: ಅಕ್ಕಮಹಾದೇವಿ, ಮಧುರಚೆನ್ನ, ಶ್ರೀ ಅರವಿಂದರು, ಬಸವೇಶ್ವರ, ಹಲಸಂಗಿ ಗೆಳೆಯರು, ಪ್ರವಾಸಕಥನ: ಶಾಲ್ಮಲೆಯಿಂದ ಗೋದಾವರಿಯವರೆಗೆ ಹಾಗೂ ಮಕ್ಕಳ ಸಾಹಿತ್ಯ: ಕವಿ ರವಿಂದ್ರರು, ಶಿ.ಶಿ.ಬಸವನಾಳ ಮತ್ತು ವಿಮರ್ಶೆ: ಸಾಹಿತ್ಯ ಸಂಬಂಧ, ಬೇಂದ್ರೆ-ಮಧುರಚೆನ್ನ ಸಖ್ಯಯೋಗ. ಸಂಪಾದಿತ ಕೃತಿಗಳು: ಕಾಲ-ಕವಿ (ಕಾವ್ಯ), ಪಾರಮಾರ್ಥ ಗೀತಾ ಪ್ರವಚನ, ಹರಿಹರನ ಐದು ರಗಳೆಗಳು, ಅರವಿಂದ ಪರಿಮಳ, ಹೈಮವತಿ ಶೈಶವಲೀಲೆ(ಗಿರಿಜಾ ಕಲ್ಯಾಣ ಸಂಗ್ರಹ), ಚೆಂಬೆಳಕು (ಕಣವಿ ಅಭಿನಂದನ ಗ್ರಂಥ), ಬೆಳಗಲಿ (ದು.ನಿಂ.ಬೆಳಗಲಿ ಅಭಿನಂದನ ಗ್ರಂಥ), ಕನ್ನಡ ಮರಾಠಿ ಸಾಹಿತ್ಯ ಬಾಂಧವ್ಯ, ಭವ್ಯ ಮಾನವ ಕಾವ್ಯ ದರ್ಶನ, ಜ್ಞಾನಸಿಂಧು, ಪಿ.ಧೂಲಾಸಾಹೇಬ, ಮಧುರಚೆನ್ನರ ಲೇಖನಗಳು, ಕನ್ನಡ ಕಾವಲು, ಚಾಮರಸ, ಮುಗಿಯದ ಹಾಡು, ಆತ್ಮಶೋಧ (ಮಧುರಚೆನ್ನರ ಸಮಗ್ರ ಸಾಹಿತ್ಯ ಶೋಧ), ಅನುವಾದ ಸಾಹಿತ್ಯ: ಇದೇ ನಿಜವಾದ ಮೂರ್ತಿಪೂಜೆ ಮತ್ತು ಇದೇ ನಿಜವಾದ ಧರ್ಮ (ಮರಾಠಿಯಿಂದ ಕನ್ನಡಕ್ಕೆ), ಬಸವೇಶ್ವರಾಂಚೆ ವಚನ (ಕನ್ನಡದಿಂದ ಮರಾಠಿಗೆ) ಪ್ರಕಟವಾಗಿವೆ.

ಪುರಸ್ಕಾರಗಳು: ವರದರಾಜ ಆದ್ಯ ಪ್ರಶಸ್ತಿ, ಆನಂದಕಂದ ಪ್ರಶಸ್ತಿ, ಸ.ಸ.ಮಾಳವಾಡ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ರಾಜ್ಯ ನಾಟಕ ಅಕಾಡೇಮಿ ಫೆಲೋಶಿಪ್, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು (2004) ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, 2001 ರಿಂದ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಮತ್ತು ಫೆಲೋಷಿಪ್ ದೊರೆತಿದೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282