ನಟ ಶಿವರಾಜ್ ಕುಮಾರ್ ಅನಾರೋಗ್ಯ: ಆಸ್ಪತ್ರೆಗೆ ದಾಖಲು!

Share
0Shares


ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಅನಾರೋಗ್ಯದ ಕಾರಣದಿಂದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವರನ್ನು ವಿಠಲ್ ಮಲ್ಯ ರಸ್ತೆಯಲ್ಲಿ ಇರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ. ಜನರಲ್ ಚಕಪ್ ಸಲುವಾಗಿ ಅವರು ಆಸ್ಪತ್ರೆಗೆ ಬಂದಿದ್ದಾರೆ ಎನ್ನಲಾಗಿದೆ. ಮಂಗಳವಾರ (ಏ.2) ಬೆಳಗ್ಗೆ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ. ಶಿವರಾಜ್ಕುಮಾರ್ ಅವರನ್ನು ನೋಡಲು ಮಧು ಬಂಗಾರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಶಿವರಾಜ್ಕುಮಾರ್ ಅವರು ಸಖತ್ ಬ್ಯುಸಿ ಆಗಿದ್ದಾರೆ. ಒಂದೆಡೆ ಸಿನಿಮಾ ಕೆಲಸ. ಇನ್ನೊಂದು ಲೋಕಸಭಾ ಚುನಾವಣಾ ಪ್ರಚಾರ. ಶಿವರಾಜ್ಕುಮಾರ್ ಅವರ ಪತ್ನಿ ಗೀತಾ ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಹಾಗಾಗಿ ಪತ್ನಿ ಪರವಾಗಿ ಪ್ರಚಾರ ಮಾಡಲು ಅವರು ಹಲವು ಊರುಗಳನ್ನು ಸುತ್ತಿದ್ದಾರೆ.
ಶಿವರಾಜ್ಕುಮಾರ್ ಅವರಿಗೆ ಈಗ 61 ವರ್ಷ ವಯಸ್ಸು. ಹದಿಹರೆಯದ ಯುವಕನಂತೆ ಅವರು ಈಗಲೂ ಫೈಟಿಂಗ್ ದೃಶ್ಯಗಳಲ್ಲಿ ನಟಿಸುತ್ತಾರೆ. ಫಿಟ್ನೆಸ್ ಬಗ್ಗೆ ಕಾಳಜಿ ವಹಿಸುತ್ತಾರೆ.
ಅವರ ಎನರ್ಜಿ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಇತ್ತೀಚಿನ ಕೆಲವು ದಿನಗಳಿಂದ ಅವರು ಬಿಡುವಿಲ್ಲದೇ ಗೀತಾ ಶಿವರಾಜ್ಕುಮಾರ್ ಪರವಾಗಿ ಪ್ರಚಾರ ಮಾಡಿದ್ದಾರೆ. ಹಾಗಾಗಿ ಅವರು ಕೊಂಚ ದಣಿದಿರುವ ಸಾಧ್ಯತೆ ಇದೆ. ಜನರಲ್ ಚಕಪ್ ಸಲುವಾಗಿ ಅವರು ‘ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ಗೆ ದಾಖಲಾಗಿದ್ದಾರೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282