FASTNEWS
MAY 18, 2024

ಮುಂಬೈ: ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ GST ವ್ಯವಸ್ಥೆಯನ್ನು ಸರಳೀಕರಣಗೊಳಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
‘ಇಂಡಿಯಾ’ ಮೈತ್ರಿಕೂಟದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಖರ್ಗೆ, ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಆದರೆ, ಅದರ ಲಾಭವನ್ನು ಪ್ರಧಾನಿ ಮೋದಿ ಪಡೆದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
‘ದೇಶದ 80 ಕೋಟಿ ಬಡವರಿಗೆ 5 ಕೆ.ಜಿ ಪಡಿತರ ನೀಡುವುದಾಗಿ ಪ್ರಧಾನಿ ಮೋದಿ ಹೇಳುತ್ತಿದ್ದಾರೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ 10 ಕೆ.ಜಿ ಪಡಿತರ ಹಂಚಲಾಗುವುದು’ ಎಂದರು.