FASTNEWS
MAY 21, 2024

ಕೋಲ್ಕತ್ತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಅವರು 24 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ಮಂಗಳವಾರ ನಿರ್ಬಂಧ ವಿಧಿಸಿದೆ.
ಕಲ್ಕತ್ತಾ ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿ ಆಗಿರುವ ಗಂಗೋಪಾಧ್ಯಾಯ ಅವರು ಪಶ್ಚಿಮ ಬಂಗಾಳದ ತಾಮ್ಲುಕ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ಗಂಗೋಪಾಧ್ಯಾಯ ಅವರು ಮೇ 15 ರಂದು ಹಲ್ದಿಯಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಮತಾ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದಾರೆ ಎಂದು ಟಿಎಂಸಿಯು ಆಯೋಗಕ್ಕೆ ದೂರು ನೀಡಿತ್ತು.
Share