FASTNEWS
MAY 22, 2024

ಬೆಂಗಳೂರು: ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದರೆ ನಾವು ಕೈಕಟ್ಟಿ ಕೂರುವುದಿಲ್ಲ. ಮುಂದೆ ನಡೆಯಬಹುದಾದ ಘಟನೆಗಳಿಗೆ ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸುವ ಯತ್ನದ ಪ್ರಕರಣವನ್ನು ಪ್ರಸ್ತಾಪಿಸಿ ಮಾತನಾಡಿದ ಅವರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಬಂಧನ ಯತ್ನ ಖಂಡನೀಯ. ಯಾರಾದರೂ ಅಕ್ರಮ ಗಣಿಗಾರಿಕೆ ಮಾಡಿದ್ದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಿ. ಆದರೆ, ವಿನಾ ಕಾರಣ ನಮ್ಮ ಪಕ್ಷದ ಯುವಮೋರ್ಚಾ ಕಾರ್ಯಕರ್ತ ಶಶಿಧರ್ ಅವರನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರು ಪೊಲೀಸ್ ಠಾಣೆಗೆ ಹೋಗಿ ಅದನ್ನು ಪ್ರಶ್ನಿಸಿದ್ದಾರೆ.
ಅಮಾಯಕರನ್ನು ಬಂಧಿಸಿರುವುದನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸ್ ದಬ್ಬಾಳಿಕೆ ಹೆಚ್ಚಾಗಿದೆ. ದಬ್ಬಾಳಿಕೆಗೆ ಕಡಿವಾಣ ಹಾಕಲು ಪೊಲೀಸರಿಗೆ ಗೃಹ ಸಚಿವರು ಸೂಚಿಸಬೇಕು ಎಂದೂ ಒತ್ತಾಯಿಸಿದರು.
Share