FASTNEWS
MAY 22, 2024

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ. ಎಸ್ ಐಟಿ ಪತ್ರ ಬರೆದಿದೆ. ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ ಎಂದರು.
ಕೇಂದ್ರ ಸರ್ಕಾರವು ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡಿದರೆ ಅರ್ಥವಿಲ್ಲ ಎಂದರು.