ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಹರ್ಷಚಿತ್ತ: ಡಿ.ಕೆ. ಶಿವಕುಮಾರ್

Share
0Shares

FASTNEWS

MAY 26, 2024

ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಮಾಧ್ಯಮಗಳ ಜೊತೆ ಈ ವಿಚಾರ ಹಂಚಿಕೊಂಡರು.

ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ ಎಂದರು.

ದೇವರ ದರ್ಶನದ ವೇಳೆ ಅನೇಕ ಮಹಿಳಾ ಭಕ್ತರು, ತಮಗೆ ಪ್ರತಿ ತಿಂಗಳು 2 ಸಾವಿರ ಹಣ ಬರುತ್ತಿದೆ ಎಂದು ಸಂತೋಷ ಹಂಚಿಕೊಂಡರು. ಅವರ ಪ್ರಾರ್ಥನೆ ಹಾಗೂ ಆಶೀರ್ವಾದ ನಮಗೆ ಹೆಚ್ಚಿನ ಶಕ್ತಿ ನೀಡುತ್ತದೆ. ಅವರ ಮನೆಯಲ್ಲಿ ಗೃಹಜ್ಯೋತಿ ಬೆಳಗುತ್ತಿದೆ. ಅನ್ನಭಾಗ್ಯ ಸಿಗುತ್ತಿದೆ. ಈ ಯೋಜನೆಗಳನ್ನು ಜಾರಿ ಮಾಡಿರುವುದಕ್ಕೆ ಮಂಜುನಾಥ ನಮಗೆ ಆಶೀರ್ವಾದ ಮಾಡಲಿದ್ದಾನೆ ಎಂದು ನಂಬಿದ್ದೇನೆ ಎಂದು ಡಿಸಿಎಂ ಹೇಳಿದರು.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282