FASTNEWS
MAY 27, 2024

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಲಿದೆ ಎಂಬುದು ಪ್ರಧಾನಿ ನರೇಂದ್ರ ಮೋದಿಗೆ ಖಾತರಿಯಾಗಿದೆ. ಹೀಗಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ನೆಹರು ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಕಸಿತ ಭಾರತ ಮಾಡಲು ದೇವರೇ ಕಳುಹಿಸಿದ್ದಾನೆ. 2047ರ ತನಕ ಸೇವೆ ಮಾಡಲು ದೇವರು ಕಳುಹಿಸಿದ್ದಾನೆ ಎಂದು ಮೋದಿ ಹೇಳುತ್ತಾರೆ. ಮತಕ್ಕಾಗಿ ಹಿಂದೂ, ಮುಸ್ಲಿಮರನ್ನು ವಿಭಜಿಸಿ ಮಾತನಾಡುತ್ತಾರೆ. ಚುನಾವಣಾ ಭಾಷಣಗಳಲ್ಲಿ ಮುಸ್ಲಿಮರ ವಿರುದ್ಧ ಮಾತನಾಡುತ್ತಾರೆ. ಅವರಿಗೆ ಬಹುತ್ವದಲ್ಲಿ ನಂಬಿಕೆಯೇ ಇಲ್ಲ ಎಂದು ಟೀಕಿಸಿದರು. ಮೋದಿ ಹಿಂದೂ ರಾಷ್ಟ್ರ ಮಾಡುತ್ತೇವೆ ಎನ್ನುತ್ತಾರೆ. ಇದು ಕನಸಿನ ಮಾತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಲಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.