ಕುಟುಂಬದ 8 ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಕೊಂದು ಆರೋಪಿ ಆತ್ಮಹತ್ಯೆ

Share
0Shares

FASTNEWS

MAY 29, 2024

ಛಿಂದ್ವಾರ: ವ್ಯಕ್ತಿಯೊಬ್ಬ ತನ್ನ ಕುಟುಂಬದ ಎಂಟು ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ನಡೆದಿದೆ.

ಬೊಡಲ್ ಕಚ್ಚರ್ ಎನ್ನುವ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕೂಡು ಕುಟುಂಬವೊಂದರಲ್ಲಿ ಈ ಘಟನೆ ನಡೆದಿದೆ. ಆತನ ಕೃತ್ಯಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ಮಹುಲ್ ಜಿರಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ನೂರು ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಛಿಂದ್ವಾರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282