FASTNEWS
MAY 29, 2024

ಚಂಡೀಗಢ: ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶಪಡಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಪುನರುಚ್ಚರಿಸಿದ್ದಾರೆ. ಲೂಧಿಯಾನದಲ್ಲಿ ಕಾಂಗ್ರೆಸ್ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಸಂವಿಧಾನ ರಕ್ಷಣೆಯ ಚುನಾವಣೆ ಆಗಿದೆ ಎಂದು ಹೇಳಿದ್ದಾರೆ.
‘ಇದೇ ಮೊದಲ ಬಾರಿಗೆ ಪಕ್ಷವೊಂದು ಚುನಾವಣೆಯಲ್ಲಿ ಗೆದ್ದರೆ ಸಂವಿಧಾನವನ್ನು ರದ್ದುಗೊಳಿಸುವುದಾಗಿ ಹೇಳುತ್ತಿದೆ. ಆದರೆ ಸಂವಿಧಾನದ ರಕ್ಷಣೆಗೆ ಕಾಂಗ್ರೆಸ್ ಹೋರಾಡಲಿದೆ’ ಎಂದು ಹೇಳಿದ್ದಾರೆ.
ಸಂವಿಧಾನದ ಪ್ರತಿಯನ್ನು ಹಿಡಿದು ಮಾತನಾಡಿದ ಅವರು ‘ಇದು ಬರಿ ಪುಸ್ತಕವಲ್ಲ, ಬಡವರ ಧ್ವನಿ’ ಎಂದು ಹೇಳಿದ್ದಾರೆ.