FASTNEWS
MAY 29, 2024

ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಎದುರಿಸಲು ಮೇ 31 ರಂದು ಸಂಸದ ಪ್ರಜ್ವಲ್ ರೇವಣ್ಣ ಬರುವ ಹೇಳಿಕೆ ನೀಡಿದ ಬೆನ್ನಲ್ಲೇ ಮಹತ್ವದ ದಾಖಲೆ ಸಂಗ್ರಹಿಸಲು ಎಸ್ ಐಟಿ ಮುಂದಾಗಿದೆ.
ಹಾಸನದ ಸಂಸದರ ನಿವಾಸದಲ್ಲಿ ಮಂಗಳವಾರ ಮಧ್ಯಾಹ್ನ ಎಸ್ ಐಟಿ ಹಾಗೂ ಎಫ್ ಎಸ್ ಎಲ್ ತಂಡ ಆರಂಭಿಸಿದ್ದ ಪರಿಶೀಲನೆ, ಸಾಕ್ಷ್ಯ ಸಂಗ್ರಹ ಬುಧವಾರ ಬೆಳಗಿನ ಜಾವ 4 ಗಂಟೆಗೆ ಪೂರ್ಣಗೊಂಡಿದೆ. ಸತತ ಹತ್ತು ಗಂಟೆಗಳ ಕಾಲ ಪರಿಶೀಲನೆ ನಡೆಯಿತು. ಆರ್.ಸಿ.ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಹಾಗೂ ಇತರೆ ವಸ್ತುಗಳನ್ನು ತಂಡ ವಶಕ್ಕೆ ಪಡೆದು ಬೆಂಗಳೂರಿಗೆ ಪ್ರಯಾಣ ಬೆಳೆಸಿತು.
Share