FASTNEWS
MAY 29, 2024

ತಮಿಳುನಾಡು: ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವೈದ್ಯೆ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.
25 ದಿನಗಳ ತರಬೇತಿಗಾಗಿ ಚೆನ್ನೈನ ಕಿಲ್ಪಾಕ್ಕಂ ಮನೋವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರೈನಿ ಡಾಕ್ಟರ್ ಆಗಿ ಬಂದಿದ್ದ ಡಾ.ಸರಣಿತಾ( 32) ಮೃತರು.
ಚೆನ್ನೈನ ಆಸ್ಪತ್ರೆಯಲ್ಲಿ ತರಬೇತಿ ಪಡೆಯಲು ಬಂದಿದ್ದ ಸರಣಿತಾ ತರಬೇತಿಗಾಗಿ ಅಯನವರಂನ ಹಾಸ್ಟೆಲ್ ನಲ್ಲಿ ತಂಗಿದ್ದರು. ಹಾಸ್ಟೆಲ್ ಕೊಠಡಿಯಲ್ಲಿ ಲ್ಯಾಪ್ ಟಾಪ್ ಚಾರ್ಜ್ ಮಾಡಲು ಯತ್ನಿಸುತ್ತಿದ್ದಾಗ ಆಕೆಗೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Share