FASTNEWS
MAY 29, 2024

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಮೇ 31ರಂದು ಬೆಂಗಳೂರಿಗೆ ಬರಲು ವಿಮಾನದ ಟಿಕೆಟ್ ಕಾಯ್ದಿರಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಜರ್ಮನಿಯ ಮ್ಯೂನಿಕ್ ನಿಲ್ದಾಣದಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣಕ್ಕೆ ಬರಲಿರುವ ಲುಫ್ತಾನ್ಸಾ ಏರ್ಲೈನ್ಸ್ ವಿಮಾನದಲ್ಲಿ ಪ್ರಜ್ವಲ್ ಹೆಸರಿನಲ್ಲಿ ಟಿಕೆಟ್ ಕಾಯ್ದಿರಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಪ್ರಜ್ವಲ್ ರೇವಣ್ಣ ಶುಕ್ರವಾರ ರಾತ್ರಿ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ