FASTNEWS
MAY 30, 2024

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟವು ನಿರ್ಣಾಯಕ ಜನಾಭಿಪ್ರಾಯ ಪಡೆಯಲಿದ್ದು, 48 ಗಂಟೆಯಲ್ಲಿ ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಮೈತ್ರಿಕೂಟದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಪಕ್ಷ ಸ್ವಾಭಾವಿಕವಾಗಿ ನಾಯಕತ್ವ ವಹಿಸಿಕೊಳ್ಳುತ್ತದೆ ಎಂದು ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
‘ಇಂಡಿಯಾ ಮೈತ್ರಿಕೂಟವು ಸರಳ ಬಹುಮತಕ್ಕೆ ಅಗತ್ಯ ಇರುವ 272ಕ್ಕಿಂತ ಅಧಿಕ ಸೀಟುಗಳಲ್ಲಿ ಗೆಲುವು ಸಾಧಿಸಲಿದೆ. ಇಂಡಿಯಾ ಒಕ್ಕೂಟದ ಪಕ್ಷದ ಪರವಾಗಿ ಜನಾಭಿಪ್ರಾಯ ಇರಲಿದೆ. ಎನ್ಡಿಎ ಮೈತ್ರಿಕೂಟದ ಕೆಲವೊಂದು ಪಕ್ಷಗಳು ನಮ್ಮ ಮೈತ್ರಿಗೆ ಸೇರಲಿವೆ. ಅವರನ್ನು ಸೇರಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಹೇಳಿದರು.
Share