FASTNEWS
MAY 31, 2024

ಬೆಂಗಳೂರು: ‘ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ’ ಆರೋಪದಡಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ತಡರಾತ್ರಿ ಬಂಧಿಸಿದ್ದಾರೆ.
ಇಂದು ಎಸ್ಐಟಿ ಕಚೇರಿಗೆ ಪ್ರಜ್ವಲ್ ರೇವಣ್ಣ ಅವರನ್ನು ಕರೆತರುವ ನಿರೀಕ್ಷೆ ಇದ್ದು ಪ್ರಜ್ವಲ್ ಪರ ವಕೀಲ ಅರುಣ್ ಅವರು ಬೆಂಗಳೂರಿನ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಗುರುವಾರ ರಾತ್ರಿ ಸಿಐಡಿ ಕಟ್ಟಡದಲ್ಲಿರುವ ಸೆಲ್‌ನಲ್ಲಿ ಪ್ರಜ್ವಲ್ ಅವರನ್ನು ಇರಿಸಲಾಗಿತ್ತು. ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಜೊತೆಗೆ, ಎಸ್‌ಐಟಿ ಪೊಲೀಸರು ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ
Share