ಇದು ಎಕ್ಸಿಟ್ ಪೋಲ್ ಅಲ್ಲ, ಮೋದಿ ಸಮೀಕ್ಷೆ: ರಾಹುಲ್ ಗಾಂಧಿ

Share
0Shares

FASTNEWS

JUNE 2, 2024

ನವದೆಹಲಿ: ಭಾರತೀಯ ಜನತಾ ಪಕ್ಷ ಮೂರನೇ ಅವಧಿಗೆ ಅಧಿಕಾರಕ್ಕೇರಲಿದೆ ಎಂದು ಎಕ್ಸಿಟ್ ಪೋಲ್‌ಗಳು ಹೇಳಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇದು ಎಕ್ಸಿಟ್ ಪೋಲ್ ಅಲ್ಲ, ಇದು ಮೋದಿ ಸಮೀಕ್ಷೆ , ಇದು ಫ್ಯಾಂಟಸಿ ಸಮೀಕ್ಷೆ ಎಂದು ಹೇಳಿದ್ದಾರೆ.

2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳನ್ನು ಘೋಷಿಸುವ ದಿನವಾದ ಜೂನ್ 4 ರ ಕಾರ್ಯತಂತ್ರದ ಕುರಿತು ಚರ್ಚಿಸಲು ರಾಷ್ಟ್ರ ರಾಜಧಾನಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಭೆ ನಡೆಸಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

ಇದು ಎಕ್ಸಿಟ್ ಪೋಲ್ ಅಲ್ಲ, ಮೋದಿ ಮೀಡಿಯಾ ಸಮೀಕ್ಷೆ. ಇದು ಅವರ ಫ್ಯಾಂಟಸಿ ಸಮೀಕ್ಷೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಭಾರತ ಮೈತ್ರಿಕೂಟಕ್ಕೆ 295 ಸ್ಥಾನ ಬರುತ್ತೆ ಎಂದು ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದಾರೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282