FASTNEWS
JUNE 5, 2024

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದಿಂದಾಗಿ ಅವರ ಮನೆಯ ಕಿಟಕಿ ಗಾಜುಗಳು ಒಡೆದು ಹೋಗಿದೆ.ಪೋಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆ ಜಯ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
Share