FASTNEWS
JUNE 10, 2024

ಉಳ್ಳಾಲ: ಮೋದಿ ಪ್ರಮಾಣವಚನ ಹಿನ್ನೆಲೆಯಲ್ಲಿ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಆರೋಪ ಕೇಳಿ ಬಂದಿದೆ.
ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್ ಹಾಗೂ ನಂದನ್ ಚೂರಿ ಇರಿತಕ್ಕೆ ಒಳಗಾದವರು ಎನ್ನಲಾಗಿದೆ.
ಗಾಯಾಳುಗಳಿಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದ್ದಾರೆ.
Share