FASTNEWSW
JUNE 11, 2024

ನವದೆಹಲಿ: ನನ್ನ ವಿಚಾರದಲ್ಲಿ ವಿಶೇಷವಾದ ನಂಬಿಕೆ ಇಟ್ಟು ಖಾತೆ ನೀಡಿದ್ದಾರೆ. ನನ್ನ ಮೇಲೆ ಸವಾಲಿದೆ. ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವತ್ತ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸಂಪುಟ ಸಭೆಯಲ್ಲಿ ಖಾತೆ ಹಂಚಿಕೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಖಾತೆ ಹಂಚಿಕೆ ಮಾಡಿದ್ದಾರೆ. ವಿಶ್ವಾಸ ಇಟ್ಟು ಖಾತೆ ಹಂಚಿಕೆ ಮಾಡಿದ್ದಾರೆ. ಪ್ರಹ್ಲಾದ್ ಜೋಶಿಯವರಿಗೆ ಆಹಾರ ಖಾತೆ ಕೊಟ್ಟಿದ್ದಾರೆ. ನನಗೆ ದೊಡ್ಡ, ಪ್ರಮುಖವಾದ ಇಲಾಖೆ ನೀಡಿದ್ದಾರೆ. ದೇಶದ ಅಭಿವೃದ್ಧಿಗೆ ಪೂರಕವಾಗಿ ನಿರೀಕ್ಷೆ ಮಾಡಿ ಖಾತೆ ನೀಡಿದ್ದಾರೆ. ಕನ್ನಡಿಗರ ಪರವಾಗಿ ಪ್ರಧಾನಿಯವರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.