FASTNEWS
JUNE 13, 2024

ಉಡುಪಿ: ಹದಿನೈದು ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿಯಾಗಿದ್ದ ಅತುಲ್ ರಾವ್ ಖುಲಾಸೆಗೊಂಡಿದ್ದಾರೆ.
ಪ್ರಕರಣದಲ್ಲಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಅತುಲ್ ರಾವ್ ವಿರುದ್ಧ ಪ್ರಕರಣ ದಾಖಲಾಗಿತ್ತು.
2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ಮನೆಯಿಂದ ನಾಪತ್ತೆಯಾಗಿದ್ದರು. ಈ ವಿಚಾರದಲ್ಲಿ ಭಟ್ ಬಾಲ್ಯ ಸ್ನೇಹಿತ, ಅತುಲ್ ರಾವ್ ನಕಲಿ ದಾಖಲೆ ಸೃಷ್ಟಿಸಿ ಮೋಸ ಮಾಡಿರುವ ಬಗ್ಗೆ 2008ರ ಜೂ. 19ರಂದು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಸಿಓಡಿ ಅಧಿಕಾರಿಗಳು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯ 2023ರ ನ.10ರಂದು ಆರೋಪಿ ಅತುಲ್‌ಗೆ ಒಂದು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿತ್ತು.
ಅತುಲ್ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದರು. ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ದಿನೇಶ್ ಹೆಗ್ಡೆ, ಆರೋಪಿ ಅತುಲ್ ನನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದ್ದಾರೆ.
Share