FASTNEWS
JUNE 14, 2024

ಬೆಂಗಳೂರು: ಜಿಲ್ಲಾಮಟ್ಟದಲ್ಲಿಯೇ ಜನರ ಅಹವಾಲು ಆಲಿಸಿ ಪರಿಹಾರ ಸೂಚಿಸಲು ಜನತಾದರ್ಶನಕ್ಕೆ ಮರು ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.
ಜನತಾದರ್ಶನವನ್ನು ಮತ್ತೆ ಆರಂಭಿಸಬೇಕು. ಜನರ ಬೇಡಿಕೆಗಳು, ಅಹವಾಲುಗಳನ್ನು ಸ್ವೀಕರಿಸಿ ಗಂಭೀರವಾಗಿ ಪರಿಗಣಿಸಿ ಸ್ಪಂದಿಸಬೇಕು. ಆಡಳಿತವನ್ನು ಜನಪರವಾಗಿಸಲು ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಮುಖ್ಯಮಂತ್ರಿಗಳು ಸೂಕ್ತ ಮಾರ್ಗದರ್ಶನ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಚುನಾವಣೆ ನೀತಿ ಸಂಹಿತೆ ತೆರವಾದ ಹಿನ್ನೆಲೆಯಲ್ಲಿ ಜನತಾ ದರ್ಶನ ಮರು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
Share