FASTNEWS
JUNE 20, 2024

ಬೆಂಗಳೂರು: ನೀಟ್ ಪರೀಕ್ಷೆ ಅಕ್ರಮ ಎನ್ ಡಿಎಯ ದೊಡ್ಡ ಹಗರಣ. ನೀಟ್ ಅಕ್ರಮ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನೀಟ್ ಅಕ್ರಮ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ನೀಟ್ ಅಕ್ರಮ ಎನ್ ಡಿಎ ಸರ್ಕಾರದ ಹಗರಣ. ನೀಟ್ ಪರೀಕ್ಷೆ ಬಗ್ಗೆ ಯುವಕರಲ್ಲಿ ಅನುಮಾನ ಇದೆ. 24 ಲಕ್ಷ ಜನ ಪರೀಕ್ಷೆ ಬರೆದವರು ಆತಂಕದಲ್ಲಿ ಇದ್ದಾರೆ. ಸುಪ್ರೀಂ ಕೋರ್ಟ್ ಕೂಡ ಇದರಲ್ಲಿ ಕ್ರಮ ಆಗಬೇಕು ಎಂದು ಕೇಂದ್ರಕ್ಕೆ ಸೂಚನೆ ನೀಡಿದೆ. ಬುಧವಾರ ರಾತ್ರಿ ನೀಟ್ ಎಕ್ಸಾಂ ಕೂಡ ಕೇಂದ್ರ ರದ್ದು ಮಾಡಿದೆ. ಇಡೀ ದೇಶದ ಯುವಕರ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟ ಆಡುತ್ತಿದೆ. ನೀಟ್ ಪರೀಕ್ಷೆ ಕುರಿತು ಸಿಬಿಐ ತನಿಖೆ ಆಗಬೇಕು. ಯುವಕರಿಗೆ ನ್ಯಾಯ ಸಿಗಬೇಕು ಅಂದರೆ ಸಿಬಿಐ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಗೊತ್ತಿಲ್ಲ. ಯುವಕರ ವಿರೋಧಿ ಧೋರಣೆ ಇದು. ಕೇಂದ್ರ ಸರ್ಕಾರ ಯಾರನ್ನು ರಕ್ಷಣೆ ಮಾಡೋಕೆ ಹೊರಟಿದೆ ಎಂದು ಗೊತ್ತಿಲ್ಲ ಎಂದರು.
Share