FASTNEWS
JUNE 22, 2024

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಸಹಿತ ಇತರೆ ಮೂವರು ಆರೋಪಿಗಳಿಗೆ ನಗರದ 42ನೆ ಎಸಿಎಂಎಂ ನ್ಯಾಯಾಲಯ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಶನಿವಾರ ಆದೇಶ ಹೊರಡಿಸಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ವಿನಯ್, ಪ್ರದೋಷ್, ಧನರಾಜ್ ಅವರ ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು (ಜೂನ್ 22) ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಯ್ತು. ಮತ್ತೆ ಪೊಲೀಸರು ಕಸ್ಟಡಿಗೆ ಕೇಳಲಿಲ್ಲವಾದ್ದರಿಂದ ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳಿಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಯ್ತು. ಇದೇ ಪ್ರಕರಣದ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ ಎರಡು ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿದೆ.