FASTNEWS
JUNE 24, 2024

ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಬಂಧನಕ್ಕೆ ಒಳಗಾದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಕೋರ್ಟ್ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ಸಿಐಡಿಗೆ ವಹಿಸಿ ಭಾನುವಾರ ಆದೇಶಿಸಿತ್ತು. ಆದರೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿರಲಿಲ್ಲ. ಭಾನುವಾರ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಇಂದು ಸೂರಜ್ ರೇವಣ್ಣ ಅವರನ್ನು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದರು. ವಿಚಾರಣೆ ವೇಳೆ ಸರ್ಕಾರಿ ವಕೀಲರು 14 ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದರೆ ನ್ಯಾಯಾಧೀಶರು 8 ದಿನ ಪೊಲೀಸ್ ಕಸ್ಟಡಿಗೆ ನೀಡಿದರು.
Share