FASTNEWs
JUNE 25, 2024

ಬೆಂಗಳೂರು: ನಿರ್ಮಾಪಕ ಉಮಾಪತಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ನಟ ದರ್ಶನ್ ಅವರ ಅಭಿಮಾನಿ ಚೇತನ್ ಎಂಬುವವರನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.
ಐಪಿಸಿ ಸೆಕ್ಷನ್ 504, 506 ಅಡಿ ಎಫ್ ಐಆರ್ ದಾಖಲಾಗಿದೆ. ಆರೋಪಿ ಚೇತನ್ ಕೂಡ ದರ್ಶನ್ ಫ್ಯಾನ್ ಆಗಿದ್ದು, ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಹಾಗೂ ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ಮಾಡಿದ್ದ. ಈ ಹಿನ್ನೆಲೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.