FASTNEWS
JUNE 25, 2024

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದರು.
ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.
ಈ ಹಿಂದೆ ಜೂನ್ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.