FASTNEWS
JUNE 26, 2024

ನವದೆಹಲಿ: ಲೋಕಸಭೆಯ ಸ್ಪೀಕರ್ ಹುದ್ದೆಗೆ ಕಾಂಗ್ರೆಸ್ ಸಂಸದ ಕೆ. ಸುರೇಶ್ ಅವರನ್ನು ಇಂಡಿಯಾ ಬ್ಲಾಕ್ ನ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ ಎಂದು ಟಿಎಂಸಿ ಆರೋಪಿಸಿದೆ.
ಕಾಂಗ್ರೆಸ್ ಸಂಸದ ಕೆ. ಸುರೇಶ್ ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಂತೆ, ಅವರ ಪತ್ರಕ್ಕೆ ಸಹಿ ಮಾಡಿದ ಇಂಡಿಯಾ ಬ್ಲಾಕ್ ಪಕ್ಷಗಳಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಇರಲಿಲ್ಲ. ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ಈ ವಿಷಯದ ಬಗ್ಗೆ ತಮ್ಮ ಪಕ್ಷದ ನಿಲುವಿನ ಬಗ್ಗೆ ಕೇಳಿದಾಗ ಅವರು ಈ ಬಗ್ಗೆ ಯಾರೂ ಇನ್ನೂ ತಮ್ಮನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.
ಇದುವರೆಗೂ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ, ಯಾವುದೇ ಮಾತುಕತೆ ನಡೆದಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರವಾಗಿದೆ” ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ನಾವು ಯಾವ ನಿಲುವು ತಳೆಯಬೇಕೆಂಬುದರ ಕುರಿತು ನಮ್ಮ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ನಿರ್ಧರಿಸುತ್ತಾರೆ ಎಂದು ಅವರು ಹೇಳಿದ್ದಾರೆ.
Share