FASTNEWS
JUNE 27, 2024

ಪುತ್ತೂರು: ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಘಟನೆ ಬನ್ನೂರಿನ ಜೈನರಗುರಿ ಸಮೀಪ ನಡೆದಿದೆ.
ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ.
ಬನ್ನೂರು ಜೈನರಗುರಿ ಮಜೀದ್ ಎಂಬವರ ಮನೆಯ ಪಕ್ಕದ ಧರೆಯೊಂದರ ಮಣ್ಣು ಮಳೆಗೆ ಸಡೀಲಗೊಂಡು ಮನೆಮೇಲೆ ಕುಸಿದು ಬಿದ್ದಿದೆ. ಮಜೀದ್ ಮತ್ತು ಮನೆ ಮಂದಿ ಮಕ್ಕಳು ಮಲಗಿದ್ದ ಕೊಠಡಿಯ ಮೇಲೆ ಮಣ್ಣು ಕುಸಿದ ಪರಿಣಾಮ ಮನೆಯ ಅರ್ಧ ಭಾಗ ಕುಸಿದಿತ್ತು. ಈ ವೇಳೆ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದರು.
ತಕ್ಷಣ ಮನೆಯಲ್ಲಿದ್ದ ಉಳಿದವರು ಮಕ್ಕಳನ್ನು ಮಣ್ಣಿನಡಿಯಿಂದ ಹೊರ ಎಳೆದು ಅಪಾಯವನ್ನು ತಪ್ಪಿಸಿದ್ದಾರೆ.
Share