ರಾಹುಲ್ ಗಾಂಧಿ ಭಾಷಣ ಹಿಂದೂ ಧರ್ಮಕ್ಕೆ ವಿರುದ್ಧವಾಗಿಲ್ಲ: ಉತ್ತರಾಖಂಡದ ಜ್ಯೋತಿರ್ ಮಠದ ಸ್ವಾಮೀಜಿ

Share
0Shares

FASTNEWS

JULY 9, 2024

ಉತ್ತರಾಖಂಡ್: ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಮಾಡಿದ ಭಾಷಣಕ್ಕೆ ಬಿಜೆಪಿ ನಾಯಕರು ಮತ್ತು ಆರ್ ಎಸ್ ಎಸ್ ಕಿಡಿಗಾರುತ್ತಿರುವುದರ ಮಧ್ಯೆ ಉತ್ತರಾಖಂಡದ ಜ್ಯೋತಿರ್ ಮಠದ 46 ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ವಿಪಕ್ಷ ನಾಯಕನಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸ್ವಾಮೀಜಿ ‘ ರಾಹುಲ್ ಗಾಂಧಿಯವರ ಭಾಷಣವು ಹಿಂದೂ ಧರ್ಮಕ್ಕೆ ವಿರುದ್ಧವಾಗಿಲ್ಲ ಎಂದು ಪ್ರತಿಪಾದಿಸಿದರು. ನಾವು ರಾಹುಲ್ ಗಾಂಧಿಯವರ ಸಂಪೂರ್ಣ ಭಾಷಣವನ್ನು ಕೇಳಿದ್ದೇವೆ, ಅವರು ಹಿಂದೂ ಧರ್ಮದಲ್ಲಿ ಹಿಂಸೆಗೆ ಸ್ಥಳವಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ರಾಹುಲ್ ಅವರ ಹೇಳಿಕೆಯ ಒಂದು ಭಾಗವನ್ನು ಮಾತ್ರ ಹರಡುವುದು ಸರಿಯಲ್ಲ ಮತ್ತು ಅದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ.

ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಬಿಜೆಪಿ ನಾಯಕರು ಮತ್ತು ಆರ್ ಎಸ್ ಎಸ್ ವಿರುದ್ಧ ಕಿಡಿ ಕಾರಿ ‘ಹಿಂದೂಗಳು ಎಂದು ಹೇಳಿಕೊಳ್ಳುವವರು ಹಗಲಿರುಳು ಹಿಂಸಾಚಾರ ಮತ್ತು ದ್ವೇಷದಲ್ಲಿ ತೊಡಗಿದ್ದಾರೆ’ ಎಂದು ಹೇಳಿಕೆ ನೀಡಿದ್ದನ್ನು ಪ್ರಧಾನಿ ಮೋದಿ ಸಹಿತ ಬಿಜೆಪಿ ನಾಯಕರು ವಿವಾದಾಸ್ಪದ ಎಂದು ಹೇಳಿದ್ದರು. ಬಿಜೆಪಿ ನಾಯಕರು ದೇಶಾದ್ಯಂತ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282