FASTNEWS
JULY 10, 2024

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಣ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ.
ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ.