FASTNEWS
JULY 11, 2024

ಹರಿಯಾಣ: ಜನನಾಯಕ್ ಜನತಾ ಪಾರ್ಟಿ (ಜೆಜೆಪಿ) ನಾಯಕನನ್ನು ಮೂವರು ದುಷ್ಕರ್ಮಿಗಳ ತಂಡ ಗುಂಡಿಕ್ಕಿ ಹತ್ಯೆಗೈರುವ ಘಟನೆ ಹರ್ಯಾಣದ ಹನ್ಸಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಮೃತರನ್ನು ಹಿಸಾರ್‌ನ ಹಂಸಿಯ ರವೀಂದರ್ ಸೈನಿ ಎಂದು ಗುರುತಿಸಲಾಗಿದ್ದು, ಸೈನಿ ಅವರು ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಯಾಗಿದ್ದರು ಎನ್ನಲಾಗಿದೆ. ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸೈನಿ ತನ್ನ ಗನ್ ಮ್ಯಾನ್ ನೊಂದಿಗೆ ತನ್ನ ಶೋರೂಮ್ ನಿಂದ ಹೊರಬರುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಸೈನಿ ಮೇಲೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ರವೀಂದರ್ ಸೈನಿ, ಮಾಜಿ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ನೇತೃತ್ವದ ಜನನಾಯಕ್ ಜನತಾ ಪಾರ್ಟಿ (ಜೆಜೆಪಿ) ಯೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ
Share