FASTNEWS
JULY 12, 2024

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ವಶಕ್ಕೆ ಪಡೆದುಕೊಂಡರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಕೇಸ್ನಲ್ಲಿ ಈಗಾಗಲೇ ಸಿಬಿಐ ಸಹ ತನಿಖೆ ನಡೆಸಿದೆ. ಇದರ ಬೆನ್ನಲ್ಲೇ ಏಕಾಏಕಿ ಇಡಿ ಅಧಿಕಾರಿಗಳು ಬುಧವಾರ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ನಿವಾಸಗಳ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದರು.
Share