FASTNEWS
JULY 18, 2024

ಬೆಂಗಳೂರು : ರೈತನಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜಿ.ಟಿ ಮಾಲ್ 7 ದಿನ ಬಂದ್ ಆಗಲಿದೆ ಎಂದು ಸದನದಲ್ಲಿ ಸಚಿವ ಭೈರತಿ ಸುರೇಶ್ ಘೋಷಣೆ ಮಾಡಿದ್ದಾರೆ.
ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ಮುಚ್ಚಲು ಬಹುತೇಕ ಶಾಸಕರು ಒತ್ತಾಯ ಮಾಡಿರುವುದರಿಂದ 7 ದಿನ ಜಿಟಿ ಮಾಲ್ ಬಂದ್ ಮಾಡಿಸುತ್ತೇವೆ.
ಈಗಾಗಲೇ ಈ ಬಗ್ಗೆ ಬಿಬಿಎಂಪಿ ಆಯುಕ್ತರ ಜೊತೆ ಮಾತನಾಡಿದ್ದೇನೆ, ಕಾನೂನಿನಲ್ಲಿ ಇದಕ್ಕೆ ಅವಕಾಶ ಇದೆ ಎಂದು ಸದನದಲ್ಲಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.
ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್ ಗೆ ಕಲ್ಕಿ ಸಿನಿಮಾ ವೀಕ್ಷಣೆಗೆ ಬಂದಿದ್ದ ಫಕೀರಪ್ಪ ಎಂಬ ವೃದ್ಧ ಪಂಚೆ ಧರಿಸಿದ್ದ ಎಂಬ ಕಾರಣಕ್ಕೆ ಮಾಲ್ ಒಳಗೆ ಬಿಡದೆ ಸಿಬ್ಬಂದಿ ಅವಮಾನ ಮಾಡಿದ್ದರು. ಸದ್ಯ ಈಗ ರೈತ ಫಕೀರಪ್ಪಗೆ ಅವಮಾನ ಮಾಡಿದ್ದ ಮಾಲ್ನಿಂದಲೇ ಸನ್ಮಾನ ಮಾಡಲಾಗಿದೆ.
Share