FAST NEWS
DATE 28-8-2024

ಕೋಲ್ಕತ್ತ: ಪಶ್ಚಿಮ ಬಂಗಾಳ ಬಂದ್ ವೇಳೆ ಆಡಳಿತಾರೂಢ ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಕೆಲವಡೆ ಘರ್ಷಣೆಯಾಗಿದೆ.
ಉತ್ತರ 24 ಪರಗಣ ಜಿಲ್ಲೆಯಲ್ಲಿ ಟಿಎಂಸಿ ಕಾರ್ಯಕರ್ತರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
‘ಭತ್ಪಾರದಲ್ಲಿ ನಮ್ಮ ಪಕ್ಷದ ನಾಯಕ ಪ್ರಿಯಾಂಗು ಪಾಂಡೆ ಅವರ ಹತ್ಯೆ ಯತ್ನ ನಡೆದಿದೆ. ಅವರ ಕಾರಿನ ಮೇಲೆ 7 ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ. ಡ್ರೈವರ್ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ’ ಎಂದು ಬಿಜೆಪಿ ನಾಯಕ ಅರುಣ್ ಸಿಂಗ್ ಹೇಳಿದ್ದಾರೆ
ಇದಕ್ಕೆ ಸಂಬಂಧಿಸಿದ ವಿಡಿಯೊ ಹಂಚಿಕೊಂಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಈ ರೀತಿ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಹಾಗೆಯೇ, ಜನರು ಸಂಪೂರ್ಣ ಬೆಂಬಲ ನೀಡಿದ್ದಾರೆ. ಬಂದ್ ಯಶಸ್ವಿಯಾಗಿದೆ ಎಂದೂ ಹೇಳಿಕೊಂಡಿದ್ದಾರೆ.