FAST NEWS
SEPTEMBER 2, 2024

ಅಮರಾವತಿ: ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹದಿಂದ ಎರಡು ರಾಜ್ಯಗಳಿಂದ ಸೇರಿ 27 ಜನ ಸಾವಿಗೀಡಾಗಿದ್ದಾರೆ.
ಮೂವರು ಕಣ್ಮರೆಯಾಗಿದ್ದು, ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ.
ಮಳೆಯ ಪರಿಣಾಮದಿಂದ ಸತ್ತವರ ಪೈಕಿ 12 ಮಂದಿ ಆಂಧ್ರಪ್ರದೇಶದವರಾಗಿದ್ದು, 15 ಮಂದಿ ತೆಲಂಗಾಣದವರಾಗಿದ್ದಾರೆ. ಇನ್ನೂ ಮಳೆಯ ಅಬ್ಬರಕ್ಕೆ ರಸ್ತೆಗಳು ಜಲಾವೃತಗೊಂಡಿದ್ದು ಕೆಲವೆಡೆ ಸಂಪೂರ್ಣ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಹಲವೆಡೆ ರಕ್ಷಣಾ ಕಾರ್ಯಾಚರಣೆಗಳಿಗೂ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
97 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಅಲ್ಲದೇ 140 ರೈಲುಗಳು ರದ್ದುಪಡಿಸಲಾಗಿದೆ. ಇದರಿಂದಾಗಿ ರೈಲ್ವೆ ನಿಲ್ದಾಣಗಳಲ್ಲಿ 6,000 ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ.
Share