FAST NEWS
SEPTEMBER 6, 2024

ಮುಂಬೈ: ನಗರದ ಕಮಲಾ ಮಿಲ್ ಕಾಂಪೌಂಡ್ ನ ಲೋವರ್ ಪರೇಲ್ ನಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡು ಅವಘಡ ಉಂಟಾಗಿದೆ.
ಏಳು ಅಂತಸ್ತಿನ ಕಟ್ಟಡ ಟೈಮ್ಸ್ ಟವರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಅಗ್ನಿ ಅವಘಡ ಸಂಭವಿಸಿದೆ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಜೊತೆಗೆ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ..
ತಕ್ಷಣವೇ ಸ್ಥಳಕ್ಕೆ ಒಂಬತ್ತು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
Share