FAST NEWS
SEPTEMBER 6, 2024

ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಅವರ ತಂಡ ಜಲಾವೃತಗೊಂಡಿದ್ದ ಹೊಳೆಯನ್ನು ವೀಕ್ಷಿಸುತ್ತಿದ್ದಾಗ ಅವರ ಸಮೀಪದಲ್ಲೇ ವೇಗವಾಗಿ ರೈಲು ಹಾದು ಹೋಗಿದೆ. ಕೂದಲೆಳೆ ಅಂತರದಿಂದ ನಾಯ್ಡು ಅಪಘಾತದಿಂದ ಪಾರಾಗಿದ್ದಾರೆ.
ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಮತ್ತು ಅವರ ತಂಡವು ರೈಲ್ವೇ ಹಳಿಯೊಂದರ ಕೆಳಗೆ ಜಲಾವೃತಗೊಂಡಿರುವ ಹೊಳೆಯನ್ನು ವೀಕ್ಷಿಸಲು ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ರೈಲ್ವೆ ಹಳಿಯ ಮೇಲೆ ರೈಲು ಬಂದಿದೆ. ಆ ವೇಳೆ ಈ ಘಟನೆ ಸಂಭವಿಸಿದೆ.
ಇದ್ದಕ್ಕಿದ್ದಂತೆ, ಒಂದು ರೈಲು ವಿರುದ್ಧ ದಿಕ್ಕಿನಿಂದ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಸಮೀಪಿಸಿತು. ಆಗ ಅವರ ಜೊತೆಗಿದ್ದ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ರೈಲು ಮಾರ್ಗದಿಂದ ತ್ವರಿತವಾಗಿ ಹಿಂದೆ ಸರಿದಿದ್ದರಿಂದ ದುರಂತವೊಂದು ತಪ್ಪಿದಂತಾಗಿದೆ. ರೈಲು ಹಾದುಹೋದ ನಂತರ, ಆ ತಂಡವು ತಮ್ಮ ತಪಾಸಣೆಯನ್ನು ಮುಂದುವರೆಸಿತು. ಸಿಎಂ ಚಂದ್ರಬಾಬು ನಾಯ್ಡು ಅವರು ಕಳೆದ ಕೆಲವು ದಿನಗಳಿಂದ ವಿಜಯವಾಡದಲ್ಲಿಯೇ ಉಳಿದುಕೊಂಡಿದ್ದು, ನಗರ ಮತ್ತು ಇತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಳು ಮತ್ತು ಪರಿಹಾರ ಪ್ರಯತ್ನಗಳು ಮುಂದುವರಿದಿವೆ.