ಸೆಪ್ಟೆಂಬರ್ 21ರಂದು ದೆಹಲಿ ಸಿಎಂ ಆಗಿ ಅತಿಶಿ ಪ್ರಮಾಣವಚನ ಸ್ವೀಕಾರ

Share
0Shares

FAST NEWS

September 18, 2024

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರು ಸೆಪ್ಟೆಂಬರ್ 21ರಂದು ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ಇಂಡಿಯಾ ಟುಡೇ ಮೂಲಗಳ ಪ್ರಕಾರ, ಹೊಸ ಸರ್ಕಾರ ರಚನೆಗಾಗಿ ಅತಿಶಿ ಅವರು ಎಲ್‌ ಜಿಗೆ ಬರೆದ ಪತ್ರದಲ್ಲಿ ಪ್ರಮಾಣ ವಚನ ಸಮಾರಂಭಕ್ಕೆ ಯಾವುದೇ ಆದ್ಯತೆಯ ದಿನಾಂಕವನ್ನು ನಮೂದಿಸಿಲ್ಲ. ತನ್ನ ಕ್ಯಾಬಿನೆಟ್ ಸಚಿವರ ಹೆಸರನ್ನು ನಂತರ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ. ಹೀಗಾಗಿ, ಅತಿಶಿ ಒಬ್ಬರೇ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಹೆಚ್ಚಾಗಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆಯ ನಂತರ ವಿ.ಕೆ. ಸಕ್ಸೇನಾ ಇಂದು ನಿಯೋಜಿತ ಮುಖ್ಯಮಂತ್ರಿ ಅತಿಶಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸೆಪ್ಟೆಂಬರ್ 21ರಂದು ದಿನಾಂಕವನ್ನು ಪ್ರಸ್ತಾಪಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282