FAST NEWS
September 18, 2024

ತುಮಕೂರು: ಮೃತದೇಹವನ್ನು ಸಾಗಿಸಲು ಆಂಬ್ಯುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ಅಪ್ಪನ ಶವವನ್ನು ಮಕ್ಕಳಿಬ್ಬರು ಬೈಕ್ ನಲ್ಲಿ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ನಡೆದಿದೆ.
ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ ಎನ್ನುವ 80 ವರ್ಷದ ವ್ಯಕ್ತಿ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಮಕ್ಕಳ ಹೊನ್ನೊರಪ್ಪ ನವರನ್ನ 108 ಆಂಬ್ಯುಲೆನ್ಸ್ ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಮಾರ್ಗಮಧ್ಯೆದಲ್ಲೇ ಹೊನ್ನೂರಪ್ಪ ಮೃತಪಟ್ಟಿದ್ದಾರೆ.
ಮೃತ ಶರೀರವನ್ನು ಸಾಗಿಸಲು 108 ಆಂಬ್ಯುಲೆನ್ಸ್ ಸಿಬ್ಬಂದಿ ನಿರಾಕರಿಸಿದ್ದಾರೆ. ಆಂಬ್ಯುಲೆನ್ಸ್ ನಲ್ಲಿ ಶವ ಸಾಗಿಸಲು ಅವಕಾಶವಿಲ್ಲ ಎಂದು ಸಬೂಬ್ ನೀಡಿದ್ದಾರೆ. ಕೈಯಲ್ಲಿ ಹಣವಿಲ್ಲದ ಹೊನ್ನೂರಪ್ಪ ಮಕ್ಕಳು ವಿಧಿಯಿಲ್ಲದೆ ತಂದೆ ಶವವನ್ನು ಬೈಕ್ ನಲ್ಲೇ ತೆಗೆದುಕೊಂಡು ಹೋಗಿದ್ದಾರೆ.