FASTNEWS
SEPTEMBER 27, 2024

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ SP ಉದೇಶ್ ನೇತೃತ್ವದಲ್ಲಿ ಎಫ್ ಐಆರ್ ದಾಖಲಾಗಿದೆ.
ಸಿಆರ್ ಪಿಸಿ ಅಡಿಯಲ್ಲಿ ಎಫ್ ಐಆರ್ ದಾಖಲಿಸಿ ಎಂದು ಕೋರ್ಟ್ ಆದೇಶ ನೀಡಿತ್ತು. ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ A 1 ಆರೋಪಿಯಾಗಿದ್ದರೆ, ಪತ್ನಿ ಪಾರ್ವತಿ A 2 ಆರೋಪಿಯಾಗಿದ್ದಾರೆ. ಇನ್ನು ಬಾಮೈದಾ ಮಲ್ಲಿಕಾರ್ಜುನ A 3, ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್ ಐಆರ್ ನಲ್ಲಿ ದಾಖಲಿಸಲಾಗಿದೆ.
Share