ಶಾಸಕನಾದ ಬಳಿಕ ಸಿಗರೇಟ್ ಸೇದುವುದು ಬಿಟ್ಟೆ: ಸಿಎಂ ಸಿದ್ದರಾಮಯ್ಯ

Share
0Shares

FASTNEWS

OCTOBER 16, 2024

ಬೆಂಗಳೂರು: ಲಾಯರ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದಿನಕ್ಕೆ 40 ಸಿಗರೇಟ್ ಸೇದುತ್ತಿದ್ದೆ. ಆದರೆ, ಶಾಸಕನಾದ ನಂತರ ಧೂಮಪಾನವನ್ನು ಬಿಟ್ಟೆ. ಹಾಗಾಗಿ ನೀವೂ (ಯುವಕರು) ಕೆಟ್ಟ ಚಟಗಳಿಗೆ ವ್ಯಸನಿಗಳಾಗಿದ್ದರೆ, ತಕ್ಷಣವೇ ಅವುಗಳನ್ನು ಬಿಟ್ಟುಬಿಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿಕೊಂಡಿದ್ದಾರೆ.

ಆರೋಗ್ಯ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಭಾಗಿತ್ವದಲ್ಲಿ ಮಂಗಳವಾರ ಆಯೋಜಿಸಿದ್ದ ತಂಬಾಕು ಮುಕ್ತ ಯುವ ಅಭಿಯಾನದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮುಖ್ಯಮಂತ್ರಿಗಳು ಮಾತನಾಡಿದರು.

ನೀವು ಡ್ರಗ್ಸ್ ಮತ್ತು ಆಲ್ಕೋಹಾಲ್ ವ್ಯಸನಿಗಳಾಗಿದ್ದರೆ, ತಕ್ಷಣ ಅವುಗಳನ್ನು ತ್ಯಜಿಸಿ. ಇದು ಕರ್ನಾಟಕದ ಯುವಕರಲ್ಲಿ ನನ್ನ ವಿನಂತಿ. ತಂಬಾಕು, ಡ್ರಗ್ಸ್ ಮತ್ತು ಮದ್ಯದ ದುಷ್ಪರಿಣಾಮಗಳ ಬಗ್ಗೆ ಎಚ್ಚರದಿಂದಿರಬೇಕು. ಮಾದಕ ದ್ರವ್ಯ ಹಾವಳಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಕಾನೂನು ತಿದ್ದುಪಡಿ ಮಾಡುವ ಮಾರ್ಗಗಳನ್ನು ರಾಜ್ಯ ಸರ್ಕಾರ ಅನ್ವೇಷಿಸುತ್ತಿದೆ. ಆ ಕಾನೂನುಗಳನ್ನು ಇನ್ನಷ್ಟು ಕಠಿಣಗೊಳಿಸಲು ಪ್ರಯತ್ನಿಸಲಾಗುವುದು ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಹೇಳಿದರು.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282