FASTNEWS
OCTOBER 19, 2024

ನವದೆಹಲಿ: ಸದ್ಗುರು ಜಗ್ಗಿ ವಾಸುದೇವ್‌ಗೆ ಬಿಗ್ ರಿಲೀಫ್ ಸಿಕ್ಕಿದೆ.
ತಮ್ಮ ಮಕ್ಕಳನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಫೌಂಡೇಶನ್‌ನ ಆಶ್ರಮದಲ್ಲಿ ಅಕ್ರಮವಾಗಿ ಇಟ್ಟಕೊಳ್ಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸದ್ಗುರು ಜಗ್ಗಿ ವಾಸುದೇವ್ ವಿರುದ್ದ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ತಮ್ಮ ಇಬ್ಬರು ಹೆಣ್ಣು ಮಕ್ಕಳ ತಲೆಕೆಡಿಸಿ ಬಲವಂತವಾಗಿ ಬಂಧಿಸಿ ಆಶ್ರಮದಲ್ಲಿ ಇರಿಸಲಾಗಿದೆ ಎಂದು ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಅಡಿಯಲ್ಲಿ ನಡೆಯುತ್ತಿದ್ದ ಎಲ್ಲ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.
ನ್ಯಾಯಾಲಯವು ಇಬ್ಬರು ಮಹಿಳೆಯ ಜತೆ ಮಾತನಾಡಿ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿತ್ತು. ಅವರು ಈಶಾ ಫೌಂಡೇಷನ್‌ನಲ್ಲಿನ ತಮ್ಮ ಸ್ವ ಇಚ್ಚೆಯಿಂದ ವಾಸವಾಗಿದ್ದೇವೆ ಎಂದು ಹೇಳಿಕೆ ನೀಡಿದ್ದರು.
Share