ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಇಂದು (ಅ.24) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಸಿಪಿ ಯೋಗೇಶ್ವರ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.