ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

Share
0Shares

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಟ್ರೈನಿ ಇಂಜಿನಿಯರ್‌ ಹಾಗೂ ಪ್ರಾಜೆಕ್ಟ್ ಇಂಜಿನಿಯರ್‌ ಸೇರಿದಂತೆ ಒಟ್ಟು 77 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಈ ಅಧಿಸೂಚನೆಯಲ್ಲಿ 23 ಟ್ರೈನಿ ಇಂಜಿನಿಯರ್‌ ಮತ್ತು 54 ಪ್ರಾಜೆಕ್ಟ್ ಇಂಜಿನಿಯರ್‌ ಹುದ್ದೆಗಳನ್ನು ಒಳಗೊಂಡಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಬಿಇಎಲ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನವೆಂಬರ್ 9 ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

– Advertisement –

ಹುದ್ದೆಗಳ ವಿವರ

  • ಟ್ರೈನಿ ಇಂಜಿನಿಯರ್‌ – 23 ಹುದ್ದೆಗಳು
  • ಪ್ರಾಜೆಕ್ಟ್‌ ಎಂಜಿನಿಯರ್‌ – 54 ಹುದ್ದೆಗಳು
  • ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ
  • ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ 2024 ರ ಅಧಿಸೂಚನೆ ಪ್ರಕಾರ ದೇಶದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಬಿ.ಎಸ್‌ಸಿ, ಬಿ.ಇ ಹಾಗೂ ಬಿ.ಟೆಕ್‌ ಪದವಿ ಹೊಂದಿದವರು ಅರ್ಜಿ ಸಲ್ಲಿಸಬಹುದು.
  • ಟ್ರೈನಿ ಇಂಜಿನಿಯರ್‌ – ಐ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 28 ವರ್ಷ ಮತ್ತು ಪ್ರಾಜೆಕ್ಟ್‌ ಇಂಜಿನಿಯರ್‌- ಐ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 32 ವರ್ಷ ಮೀರಿರಬಾರದು.
  • ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯಿದೆ.
  • ಅರ್ಜಿ ಶುಲ್ಕಗಳು
  • ಎಸ್‌ಸಿ/ಎಸ್‌ಟಿ ಹಾಗೂ ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
  • ಇನ್ನುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ಟ್ರೈನಿ ಇಂಜಿನಿಯರ್‌ – ಐ ಹುದ್ದೆಗೆ 150 ರೂ. ಹಾಗೂ ಪ್ರಾಜೆಕ್ಟ್‌ ಇಂಜಿನಿಯರ್‌- ಐ ಹುದ್ದೆಗೆ 400 ರೂ ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.
Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282