ಶಿಗ್ಗಾಂವಿಯಲ್ಲಿ ಯಾಸೀರ್ ಖಾನ್ ಪಠಾಣ್ ಬಿಜೆಪಿಯ ಭರತ್ ಬೊಮ್ಮಾಯಿ ವಿರುದ್ಧ ಭರ್ಜರಿ ಜಯ ಗಳಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಹೀನಾಯ ಸೋಲಾಗಿದೆ. ಈ ಮೂಲಕ ದಶಕಗಳಿಂದ ಬಿಜೆಪಿ ತೆಕ್ಕೆಯಲ್ಲಿದ್ದ ಭದ್ರಕೋಟೆ ಅಲುಗಾಡಿದೆ. ಯಾಸೀರ್ ಖಾನ್ 14 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಯಾಸೀರ್ ಪಠಾಣ್ ಅವರು 88,985 ಮತ್ತು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ 74,870 ಮತ ಗಳಿಸಿದ್ದಾರೆ. ಈ ಕ್ಷೇತ್ರದಲ್ಲಿ 2023ರಲ್ಲಿ ಬಿಜೆಪಿಯ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದರು.ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ರಾಜೀನಾಮೆ ಸಲ್ಲಿಸಿದ್ದರು.
Share