0Shares
Post Views: 42
ವಯನಾಡ್: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧಿಸಿದ್ದು, ತಮ್ಮ ಚೊಚ್ಚಲ ಸ್ಪರ್ಧೆಯಲ್ಲಿ ಅವರು 1.56 ಲಕ್ಷ ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪ್ರಿಯಾಂಕಾ ಅವರು 2.38 ಲಕ್ಷ ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದಾರೆ. ಎಲ್ ಡಿಎಫ್ ನ ಸತ್ಯನ್ ಮೊಕೇರಿ 63 ಸಾವಿರ ಮತಗಳನ್ನು ಹಾಗೂ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ ಅವರು 34 ಸಾವಿರ ಮತಗಳನ್ನು ಪಡೆದು ಕ್ರಮವಾಗಿ 2 ಹಾಗೂ 3ನೇ ಸ್ಥಾನದಲ್ಲಿದ್ದಾರೆ.
0Shares