0Shares
Post Views: 33
ಬೆಂಗಳೂರು: ಕರ್ನಾಟಕ ಬಿಜೆಪಿ ಬಣ ಜಗಳ ತಾರಕಕ್ಕೇರುತ್ತಿರುವ ಬೆನ್ನಲ್ಲೇ ಹೈಕಮಾಂಡ್ ಎಂಟ್ರಿಕೊಟ್ಟಿದೆ. ಪಕ್ಷದ ವಿರುದ್ಧ ಸದಾ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
0Shares