ಹೈದರಾಬಾದ್: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾ ದೇಶದೆಲ್ಲೆಡೆ ಗುರುವಾರ ರಿಲೀಸ್ ಆಗಿದ್ದು, ಇದರ ಬೆನ್ನಲೇ ನಟ ಅಲ್ಲು ಅರ್ಜುನ್ ಸೇರಿದಂತೆ ಚಿತ್ರ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ. ಬುಧವಾರ ಪುಷ್ಪ 2 ಸಿನಿಮಾದ ಪ್ರೀಮಿಯರ್ ಶೋ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಪ್ರದರ್ಶನಗೊಂಡಿದ್ದು ಈ ವೇಳೆ ಸಹಸ್ತ್ರ ಸಂಖ್ಯೆಯಲ್ಲಿ ನೆರೆದಿದ್ದ ಅಲ್ಲು ಅರ್ಜುನ್ ಅಭಿಮಾನಿಗಳು ಸೇರಿದ್ದು ಅದೇ ವೇಳೆ ಥಿಯೇಟರ್ ಗೆ ಆಗಮಿಸಿದ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದ ಹಿನ್ನೆಲೆಯಲ್ಲಿ ಕಾಲ್ತುಳಿತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟು ಆಕೆಯ ಮಗ ಗಂಭೀರ ಗಾಯಗೊಂಡಿರುವ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ಹಾಗೂ ಚಿತ್ರ ತಂಡ ಸೇರಿದಂತೆ ಥಿಯೇಟರ್ ಮಾಲೀಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105 ಮತ್ತು 118 (1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕೇಂದ್ರ ವಲಯ ಡಿಸಿಪಿ ಆಕಾನ್ಶ್ ಯಾದವ್ ಖಚಿತಪಡಿಸಿದ್ದಾರೆ.
Share