ಚರ್ಚ್‌‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಪ್ರಕರಣ ದಾಖಲು : ಶಿಲ್ಲಾಂಗ್ ಮೇಘಾಲಯ ಸಿಎಂ ಕಾನಾಡ್ ಸಂಗ್ರಾ ಘಟನೆ

Share
0Shares

ಶಿಲ್ಲಾಂಗ್: ವ್ಯಕ್ತಿಯೊಬ್ಬ ಚರ್ಚ್‌ ಗೆ ನುಗ್ಗಿ ಜೈ ಶ್ರೀರಾಂ ಘೋಷಣೆ ಕೂಗಿದ ಘಟನೆ ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆಕಾಶ್ ಸಾಗರ್ ಎಂಬಾತ ಮಾವಿನ್ನಾಂಗ್ ಗ್ರಾಮದ ಚರ್ಚ್ ಒಳಗೆ ಅಕ್ರಮವಾಗಿ ಪ್ರವೇಶಿಸಿದ್ದಾನೆ. ಬಳಿಕ ಜೈ ಶ್ರೀರಾಂ ಘೋಷಣೆ ಕೂಗಿ ಅದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಈ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೊಪದಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮೇಘಾಲಯ ಸಿಎಂ ಕಾನಾಡ್ ಸಂಗ್ರಾ ಅವರು ಈ ಘಟನೆಯನ್ನು ಖಂಡಿಸಿದ್ದಾರೆ. ಇದು ಉದ್ದೇಶಪೂರ್ವಕ ಕೃತ್ಯವಾಗಿದೆ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರವು ಸಾಮಾಜಿಕ, ಧಾರ್ಮಿಕ ಅಥವಾ ಕೋಮು ಸಾಮರಸ್ಯ ಕದಡುವುದಕ್ಕೆ ಅವಕಾಶ ಮಾಡಿ ಕೊಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282